Loading Now

ಅಕ್ಷಿತ್ ಶಶಿಕುಮಾರ್ ಹೊಸ ಚಿತ್ರ “ಕಾದಾಡಿ”.

ಸಿನಿಮಾ ಸುದ್ದಿ ಜ 04 :

ಸುಪ್ರೀಂ ಹೀರೋ ಶಶಿಕುಮಾರ್ ಪುತ್ರ ಅಕ್ಷಿತ್‌ಶಶಿಕುಮಾರ್ ’ಕಾದಾಡಿ’ ಎನ್ನುವ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಕನ್ನಡ, ತೆಲುಗು ಮತ್ತು ತಮಿಳು ಭಾಷೆಯಲ್ಲಿ ಸಿದ್ದಗೊಳ್ಳುತ್ತಿರುವ ಸಿನಿಮಾವನ್ನು ಸತೀಶ್ ಮಲೇಮ್‌ಪಟಿ ನಿರ್ದೇಶಿಸಿ, ಅರುಣಂ ಫಿಲಿಂಸ್ ಮುಖಾಂತರ ನಿರ್ಮಾಣ ಮಾಡುತ್ತಿದ್ದಾರೆ.
ತ್ಯಾಗಮಯವಾಗುತ್ತಿರುವ ಜನರ ಜೀವನವು ದಿನದ ಅಂತ್ಯದಲ್ಲಿ ಪ್ರತಿಯೊಬ್ಬರು ತ್ಯಾಗಮಯಿರಾಗುತ್ತಾರೆ. ನಾವೆಲ್ಲರೂ ಕಾದಾಡುತ್ತಾ ಒಂದು ದಿನ ಸಾಯುತ್ತೇವೆ. ಆದರೆ ನಮ್ಮ ಜೀವನವನ್ನು ತ್ಯಾಗ ಮಾಡುವ ಮೂಲಕ ಸಮಾಜಕ್ಕೆ ಏನಾನ್ನಾದರೂ ಕೊಡಬೇಕು. ಮಕ್ಕಳಿಗೆ ಏನಾದರೂ ಆಗಬೇಕು. ನಾವು ದಿನದಿಂದ ದಿನಕ್ಕೆ ಹೋರಾಟ ನಡೆಸುತ್ತಿದ್ದೆವೆ. ಇಂತಹ ಅಂಶಗಳನ್ನು ಥ್ರಿಲ್ಲರ್ ಮೂಲಕ ತೋರಿಸುವ ಪ್ರಯತ್ನ ಮಾಡಲಾಗಿದೆ.
ಲಾವಣ್ಯಸಾಹುಕಾರ, ಚಾಂದಿನಿತಮಿಳರಸನ್ ನಾಯಕಿಯರು. ಉಳಿದಂತೆ ಪೋಸಾನಿ, ರವಿಕಾಳೆ, ಮಾರಿಮುತ್ತು, ಪ್ರೇಮ್‌ಮನೋಹರ್, ಶ್ರವಣ್‌ರಾಘವೇಂದ್ರ ಮುಂತಾದವರು ನಟಿಸಿದ್ದಾರೆ. ಆರು ಹಾಡುಗಳಿಗೆ ಭೀಮ್ಸ್ ಸಿಸಿರಿಲಿಯೋ ಸಂಗೀತ ಸಂಯೋಜಿಸಿದ್ದಾರೆ. ಛಾಯಾಗ್ರಹಣ ಡಿ.ಯೋಗಿಪ್ರಸಾದ್, ಕಲೆ ಅರ್ಜುನ್‌ಸೂರಿಸೆಟ್ಟಿ, ಸಂಕಲನ ಪ್ರಕಾಶ್‌ತೋಟ, ನೃತ್ಯ ರಾಜ್‌ಪಿಡಿ-ರಾಜ್‌ಕೃಷ್ಣ, ಸಾಹಸ ಬಿ.ಎಲ್.ಸತೀಶ್-ವಿನ್‌ಚೇನ್ ಆಂಜಿ-ಬಿಂಬಸಾರ ರಾಮಕೃಷ್ಣ-ರಾಮಸುಂಕರ ಅವರದಾಗಿದೆ. ಗೋವಾ, ಚಿಕ್ಕಮಗಳೂರು, ಹೈದರಬಾದ್, ಚೆನ್ನೈ ಸುಂದರ ತಾಣಗಳಲ್ಲಿ ಚಿತ್ರೀಕರಣ ನಡೆಸಿ, ಐಟಂ ಹಾಡನ್ನು ಸದ್ಯದಲ್ಲೆ ಮುಗಿಸಲು ತಂಡವು ಯೋಜನೆ ರೂಪಿಸಿಕೊಂಡಿದೆ.

Post Comment

You May Have Missed