ಕಾರ್ಮಿಕ ಶ್ರಮಿಕ ಸನ್ಮಾನ್ ಕಾರ್ಯಕ್ರಮಕ್ಕೆ ಮನವಿ
ಬೆಂಗಳೂರು ಸೆ.೦೬: ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಶ್ರಮಿಕ ಸನ್ಮಾನ್ ಕಾರ್ಯಕ್ರಮ ಬಾಕಿ ಉಳಿದಿರುವ ಜಿಲ್ಲೆಗಳಲ್ಲಿ ಕಾರ್ಯಕ್ರಮ ಆಯೋಜಿಸಿ ನಾಡಹಬ್ಬ ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ಕಾರ್ಮಿಕರನ್ನು ಅಭಿನಂದಿಸಬೇಕೆಂದು ಕರ್ನಾಟಕ ಪ್ರದೇಶ ಅಸಂಘಟಿತ ಕಾರ್ಮಿಕ ಪರಿಷತ್ ಇಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಅವರಿಗೆ ಮನವಿ ಸಲ್ಲಿಸಿತು.
ಅಸಂಘಟಿತ ಕಾರ್ಮಿಕರಿಗೆ ಪ್ರತಿ ಜಿಲ್ಲೆಯಲ್ಲಿ ಕಾರ್ಮಿಕ ಸನ್ಮಾನ್ ಕಾರ್ಯಕ್ರಮದ ಅಡಿಯಲ್ಲಿ ಸರ್ಕಾರದ ವತಿಯಿಂದ ನಗದು ಪುರಸ್ಕಾರದೊಂದಿಗೆ ನೆನಪಿನ ಕಾಣಿಕೆಯೊಂದಿಗೆ ಸಾದಕ ಕಾರ್ಮಿಕರಿಗೆ ಪುರಸ್ಕರಿಸುವ ಕಾರ್ಯಕ್ರಮ ಪ್ರತಿವರ್ಷ ಮಾರ್ಚ್ ೧ ರಂದು ನಡೆಸಬೇಕೆಂದು ಸರ್ಕಾರದ ನಿರ್ಧರಿಸಿತ್ತು. ಕರೋನಾ ದಿಂದಾಗಿ ಕಾರ್ಯಕ್ರಮ ಮುಂದೂಡಲ್ಪಟ್ಟಿತ್ತು. ಈಗಾಗಲೇ ನಿಗಧಿ ಪಡಿಸಿ ಪ್ರತಿ ಜಿಲ್ಲೆಗಳಿಗೆ ಆರ್ಥಿಕ ನೆರವು ಬಿಡುಗಡೆ ಮಾಡಿದ್ದು, ಬೆಂಗಳೂರು-ಕೋಲಾರ-ಮೈಸೂರು, ಮಂಗಳೂರು ಮುಂತಾದ ಜಿಲ್ಲೆಗಳಲ್ಲಿ ಈ ಕಾರ್ಯಕ್ರಮ ಮುಂದೂಡಲ್ಪಟ್ಟಿದೆ. ಆದ್ದರಿಂದ ನಾಡಹಬ್ಬ ರಾಜ್ಯೋತ್ಸವ ಸಂಧರ್ಭದಲ್ಲಿ ಬಾಕಿ ಉಳಿದಿರುವ ಜಿಲ್ಲೆಗಳಲ್ಲಿ ಕಾರ್ಯಕ್ರಮ ಆಯೋಜಿಸಿ, ಕಾರ್ಮಿಕರನ್ನು ಅಭಿನಂದಿಸಬೇಕೆಂದು ಕರ್ನಾಟಕ ಪ್ರದೇಶ ಅಸಂಘಟಿತ ಕಾರ್ಮಿಕ ಪರಿಷತ್ ಅಧ್ಯಕ್ಷ ಕೆ.ವಿ. ಸುರೇಶ್ ಕುಮಾರ್ ತಿಳಿಸಿದ್ದಾರೆ.



Post Comment