ಡಿಸಿ ಗೌರಿಶಂಕರ್ ರವರಿಂದ ವನ ಮಹೋತ್ಸವಕ್ಕೆ ಚಾಲನೆ!
ತುಮಕೂರು – ಗ್ರಾಮಾಂತರ ಹಿರೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಂಚಕಲ್ ಕುಪ್ಪೆ, ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಯಲ್ಲಿ ಅರಣ್ಯ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ವನ ಮಹೋತ್ಸವ ಕಾರ್ಯಕ್ರಮಕ್ಕೆ ಶಾಸಕ ಡಿಸಿ ಗೌರಿಶಂಕರ್ ಹಾಗೂ ಅಧಿಕಾರಿಗಳು ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು, ಈ ಸಂದರ್ಭದಲ್ಲಿ, ಗ್ರಾಮಸ್ಥರ ಕುಂದು ಕೊರತೆಗಳಿಗೆ ಸ್ಥಳದಲ್ಲೇ ಪರಿಹಾರ ಮಾಡಿಕೊಟ್ಟರು, ಈ ಸಂದರ್ಭದಲ್ಲಿ ಮಾಜಿ ತಾಲೂಕು ಪಂಚಾಯಿತಿ ಸದಸ್ಯರಾದ ರಮೇಶ್, ಗ್ರಾಮ ಪಂಚಾಯತಿ ಸದಸ್ಯರುಗಳಾದ, ತನ್ವೀರ್ ಅಹಮದ್, ಅನ್ನಿಸ್ ಬಾಬು, ನಾಗರತ್ನಮ್ಮ, ಹಾಗೂ ಸರ್ಕಾರಿ ಶಾಲೆಯ ಎಸ್. ಡಿ.ಎಂ. ಸಿ ಅಧ್ಯಕ್ಷರು ,ಅರಣ್ಯ ಇಲಾಖೆ ಅಧಿಕಾರಿಗಳು, ಗ್ರಾಮಸ್ಥರು, ಶಾಲೆಯ ಮಕ್ಕಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Post Comment