ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಕೈಬಿಡಿ
ಮೈಸೂರು ಸೆ.೬: ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ ಜಾರಿಗೊಳಿಸದೇ ತಕ್ಷಣವೇ ತಡೆ ಹಿಡಿಯಬೇಕು ಎಂದು ಕೃಷ್ಣರಾಜ ಯುವ ಬಳಗದ ಅಧ್ಯಕ್ಷ ನವೀನ್ ಕೆಂಪಿ ಆಗ್ರಹಿಸಿದ್ದಾರೆ. ನೂತನ ಶಿಕ್ಷಣ ನೀತಿಯು ಮಹಿಳೆಯರ, ದಲಿತರು ಹಾಗೂ ಹಿಂದುಳಿದ ವರ್ಗಗಳ ಬಡವರಿಗೆ ರಾಜ್ಯದ ಶೇ ೯೫ ರಷ್ಟು ಜನರಿಗೆ ಶಿಕ್ಷಣ ಮರೀಚಿಕೆಯಾಗಿಸುವ ಅಪಾಯವಿದೆ. ರಾಜ್ಯದ ಕನ್ನಡ ಹಾಗೂ ಕನ್ನಡಿಗರ ಇತರೆ ಮಾತೃ ಭಾಷೆಗಳ ತೆಲುಗು, ತುಳು, ಕೊಡವ, ಉರ್ದು, ಮರಾಠಿ, ಕೊಂಕಣಿ, ಲಮಾಣಿ ಮುಂತಾದ ಭಾಷೆಗಳ ಮೇಲೆ ಇಂಗ್ಲಿಷ್ ಹಾಗೂ ಸಂಸ್ಕೃತ, ಹಿಂದಿ ಭಾಷೆಗಳನ್ನು ಹೇರುವ ಹುನ್ನಾರ ಅಡಗಿದೆ ಎಂದು ದೂರಿದರು. ಲಕ್ಷಾಂತರ ಅಂಗನವಾಡಿ ಕೇಂದ್ರಗಳು, ಏಕೋಪಾಧ್ಯಾಯ ಹಾಗೂ ವಿದ್ಯಾರ್ಥಿಗಳ ಕೊರತೆ ಎದುರಿಸುವ ಸಾರ್ವಜನಿಕ ಶಿಕ್ಷಣ ಸಂಸ್ಥೆಗಳು ಮುಚ್ಚಿ ಹೋಗಲಿವೆ. ಮಹಿಳೆಯರು ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ನೀಡಲಾಗುತ್ತಿರುವ ಪೌಷ್ಠಿಕ ಆಹಾರದ ಯೋಜನೆ ರದ್ದಾಗಲಿದೆ. ಮತಿಯ ಭಾವನೆಗಳನ್ನು ಹರಡುವ ರಾಜ್ಯದ ಸಮಗ್ರತೆಗೆ, ಏಕತೆಗೆ ಭಂಗ ಉಂಟುಮಾಡುವ ದುರುದ್ದೇಶ ಹೊಂದಿದೆ ಎಂದು ದೂರಿದರು. ಗಂಭೀರ ಅಪಾಯಗಳನ್ನು ರಾಜ್ಯದ ಜನತೆಯ ಮೇಲೆ ಹೇರಲಿದ್ದು ಮತ್ತಷ್ಟು ವ್ಯಾಪಕ ಚರ್ಚೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು.


Post Comment