Loading Now

ಪಿರಿಯಾಪಟ್ಟಣ

ವಿದ್ಯಾರ್ಥಿಗಳೇ ಮುಂದಿನ ಪ್ರಜೆಗಳು ಆದ್ದರಿಂದ ಪೋಷಕರು ಶಿಕ್ಷಕರು ಅವರಿಗೆ ಸಹಕಾರ ನೀಡಬೇಕು ಎಂದು ಶಾಸಕ ಕೆ ಮಹದೇವ್ ತಿಳಿಸಿದರು ತಾಲೂಕಿನ ರಾಜನಬಿಳಗೂಲಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ ಶಾಲಾ ಕಟ್ಟಡ  ಡಾಕ್ಟರ್ ಬಿಆರ್ ಅಂಬೇಡ್ಕರ್ ಭವನ ಉದ್ಘಾಟನೆ ರಸ್ತೆ ಚರಂಡಿ  ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡುತ್ತಿದ್ದರು ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಶಾಲಾ ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ ಇದನ್ನು ಸದುಪಯೋಗಪಡಿಸಿಕೊಂಡು ಮುಂದೆ ಬರಬೇಕು  ವಿದ್ಯಾರ್ಥಿಗಳ ಜೀವನ ಹಸನಾಗುತ್ತದೆ  ಆಗಮಾತ್ರ ತಾಲೂಕಿನ ರಾಜ್ಯದ ದೇಶದ ಅಭಿವೃದ್ಧಿ ಸಾಧ್ಯ ಎಂದು ತಿಳಿಸಿದರು ಕಾರ್ಯನಿರ್ವಹಣಾಧಿಕಾರಿ ಕೃಷ್ಣಕುಮಾರ್ ಮಾತನಾಡುತ್ತಾ ವಿದ್ಯಾರ್ಥಿ ದೆಸೆಯಿಂದಲೇ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಿದಲ್ಲಿ ಅವರು ಉನ್ನತ ಮಟ್ಟಕ್ಕೆ ಹೋಗುತ್ತಾರೆ ಸಮಾಜದ  ಎಲ್ಲರ ಸಹಕಾರ ಅತ್ಯಗತ್ಯ ಎಂದರು ತಹಸಿಲ್ದಾರ್ ಕೆ ಚಂದ್ರಮೌಳಿ  ಕ್ಷೇತ್ರ ಶಿಕ್ಷಣಾಧಿಕಾರಿ ತಿಮ್ಮೇಗೌಡ ಪಶುಪಾಲನ ಇಲಾಖೆಯ ಡಾಕ್ಟರ್ ಸೋಮಯ್ಯ ಕೃಷಿ ಇಲಾಖೆಯ ಪ್ರಸಾದ್ ಆಹಾರ ಇಲಾಖೆಯ ಶಿರಸ್ತೇದಾರ್ ಸಣ್ಣಸ್ವಾಮಿ ಗ್ರಾಪಂ ಅಧ್ಯಕ್ಷ ಗೀತಾ ಮಹದೇವ್ ತಾಲೂಕು ಜೆಡಿಎಸ್ ಅಧ್ಯಕ್ಷ ಅಣ್ಣಯ್ಯ ಶೆಟ್ಟಿ ಮುಖಂಡರಾದ ಮಹದೇವ ಹನುಮಂತು ಗಣೇಶ್ ಸೇರಿದಂತೆ ಹಲವಾರು ಮಂದಿ ಹಾಜರಿದ್ದರು

Post Comment

You May Have Missed