Loading Now

ಬಸ್ ಪಲ್ಟಿ ಭೀಕರ ಅಪಘಾತ ದಿಂದಾಎಂಟು ಮಂದಿ ಸಾವು





ತುಮಕೂರು ಮಾ 19 : ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆಯ ಬಳಿ ಖಾಸಗಿ ಎಸ್‍ವಿಟಿ ಬಸ್ ಪಲ್ಟಿ ಆಗಿ ಭೀಕರ ಅಪಘಾತ ಸಂಭವಿಸಿದೆ. ಸ್ಥಳದಲ್ಲೇ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಬಸ್‍ನಲ್ಲಿದ್ದ 25ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದೆ. ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಬಸ್‍ನ ಮೇಲೆ ಕೂಡ ಸುಮಾರು 40 ಜನ ಕುಳಿತಿದ್ದರು ಎಂದು ತಿಳಿದುಬಂದಿದೆ. ಚಾಲಕನ ನಿಯಂತ್ರಣ ತಪ್ಪಿ ಬಸ್ ಉರುಳಿ ಬಿದ್ದಿದೆ ಎಂದು ಹೇಳಲಾಗಿದೆ. ಘಟನಾ ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸಿದ್ದಾರೆ. ಸ್ಥಳಕ್ಕೆ ಎಸ್‍ಪಿ ರಾಹುಲ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗಾಯಾಳುಗಳ ಪೈಕಿ ಹೆಚ್ಚಿನವರು ವಿದ್ಯಾರ್ಥಿಗಳೇ ಇದ್ದಾರೆ. ಬಸ್ ಮೇಲೆ 60 ಜನ ಕುಳಿತು ಪ್ರಯಾಣಿಸುತ್ತಿದ್ದರು. ಗಾಯಾಳುಗಳು ಪಾವಗಡ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ ಅಂತ ತಿಳಿಸಿದ್ದಾರೆ. ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ ಆಗಿದೆ. 8 ಜನ ಸಾವನ್ನಪ್ಪಿದ್ದಾರೆ. ಬಸ್ ಮೇಲೆ ಸುಮಾರು 40ಕ್ಕೂ ಹೆಚ್ಚು ಜನರು ಇದ್ದರು. ಓವರ್ ಲೋಡ್ ಆಗಿದ್ದ ಹಿನ್ನೆಲೆ ಸ್ಟಾಪ್ ಕೊಟ್ಟಿರಲಿಲ್ಲ. ಕೆಲ ಗ್ರಾಮಗಳಲ್ಲಿ ಬಸ್ ಸ್ಟಾಪ್ ನೀಡದೆ ಹೋಗಿತ್ತು. ಅಪಘಾತವಾದ ಕೂಡಲೇ ಚಾಲಕ, ನಿರ್ವಾಹಕ ಪರಾರಿ ಆಗಿದ್ದಾರೆ. ಖಾಸಗಿ ಬಸ್ ಚಕ್ರಕ್ಕೂ ಸಿಲುಕಿ ಕೆಲವರು ಮೃತಪಟ್ಟಿದ್ದಾರೆ ಎಂದು ಪ್ರತ್ಯಕ್ಷದರ್ಶಿ ಗೋಪಾಲ್ ಮಾಹಿತಿ ನೀಡಿದ್ದಾರೆ.

Post Comment

You May Have Missed