Loading Now

ಬಹು ನಿರೀಕ್ಷಿತ “ದೃಶ್ಯ 2” ಚಿತ್ರಕ್ಕೆ ಯು\ಎ ಪ್ರಮಾಣ ಪತ್ರ.

ಡಿಸೆಂಬರ್ 10 ರಂದು ಚಿತ್ರ ತೆರೆಗೆ.

2014 ರಲ್ಲಿ ತೆರೆಕಂಡು ಅಪಾರ ಮೆಚ್ಚುಗೆ ಪಡೆದುಕೊಂಡಿದ್ದ ಚಿತ್ರ “ದೃಶ್ಯ”.ಈಗ ಇದೇ ಚಿತ್ರದ ಮುಂದುವರೆದ ಭಾಗ ” ದೃಶ್ಯ 2″ ಎಂಬ ಹೆಸರಿನಿಂದ ನಿರ್ಮಾಣವಾಗಿದ್ದು, ಈ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು\ಎ ಅರ್ಹತಾ ಪತ್ರ ನೀಡಿದೆ. ಚಿತ್ರ  ಡಿಸೆಂಬರ್ 10 ರಂದು ರಾಜ್ಯಾದ್ಯಂತ ತೆರೆಗೆ ಬರಲಿದೆ.
ಪಿ.ವಾಸು ಅವರ ನಿರ್ದೇಶನದ ಈ ಚಿತ್ರದ ನಾಯಕರಾಗಿ ಕ್ರೇಜಿಸ್ಟಾರ್ ರವಿಚಂದ್ರನ್ ನಟಿಸಿದ್ದಾರೆ. ಹಿರಿಯ ನಟ ಅನಂತನಾಗ್, ನವ್ಯ ನಾಯರ್,ಪ್ರಭು ಶಿವಾಜಿ, ಸಾಧುಕೋಕಿಲ, ನೀತು ರೈ, ಪ್ರಮೋದ್ ಶೆಟ್ಟಿ, ಅಶೋಕ್, ಶಿವರಾಂ, ಉನ್ನತಿ,  ಕೃಷ್ಣ ಯಟರ್ನ್, ನಾರಾಯಣ್ ಸ್ವಾಮಿ, ಲಾಸ್ಯ ನಾಗರಾಜ್, ಯತಿರಾಜ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ..E4 Entertainment ಲಾಂಛನದಲ್ಲಿ ನಿರ್ಮಾಣವಾಗಿರುವ ಈ ಚಿತ್ರ Zee ಸ್ಟುಡಿಯೋ ಮೂಲಕ ಬಿಡುಗಡೆಯಾಗುತ್ತಿದೆ.  ಸಿ.ವಿ.ಸಾರಥಿ ಕಾರ್ಯಕಾರಿ ನಿರ್ಮಾಪಕರಾಗಿರುವ ಈ ಚಿತ್ರಕ್ಕೆ ಜೀತು ಜೋಸೆಫ್ ಕಥೆ ಬರೆದಿದ್ದಾರೆ. ಜಿ.ಎಸ್.ವಿ ಸೀತಾರಾಂ ಛಾಯಾಗ್ರಹಣ, ಸುರೇಶ್ ಅರಸ್ ಸಂಕಲನ , ರವಿ ಸಂತೆಹುಕ್ಲು ಅವರ ಕಲಾ ನಿರ್ದೇಶನ ಹಾಗೂ ಲೋಕೇಶ್ ಬಿಕೆ ಗೌಡ , ಭರತ್ ಅವರ ನಿರ್ಮಾಣ ನಿರ್ವಹಣೆ  “ದೃಶ್ಯ 2” ಚಿತ್ರಕ್ಕಿದೆ‌.

Previous post

*ಆರ್.ಕೆ ನಿರ್ದೇಶನದಲ್ಲಿ “ಕಾಣಿಯಾಗಿದ್ದಾಳೆ”* *ಹುಡುಕಿ ಕೊಟ್ಟವರಿಗೆ ಬಹುಮಾನ..* *ಹಳ್ಳಿ ಸೊಗಡಿನ ಈ ಚಿತ್ರಕ್ಕೆ ಧರ್ಮಗಿರಿ ಶ್ರೀ ಮಂಜುನಾಥ ದೇಗುಲದಲ್ಲಿ ಮುಹೂರ್ತ.*

Next post

ಡಿಸೆಂಬರ್ 10ರಂದು ಆರು ಭಾಷೆಗಳಲ್ಲಿ ತೆರೆಗೆ ಬರಲಿದೆ‌ “ಮಡ್ಡಿ” ಚಿತ್ರ.

Post Comment

You May Have Missed