ಮಹರ್ಷಿ ವಾಲ್ಮೀಕಿ ಅವರು ರಚಿಸಿರುವ ರಾಮಾಯಣ ಎಂಬ ಮಹಾಕಾವ್ಯ ಇಡೀ ವಿಶ್ವಕ್ಕೆ ಭಾರತ ನೀಡಿದ ಬಹುದೊಡ್ಡ ಸಾಹಿತ್ಯ ಕೊಡುಗೆಯಾಗಿದೆ ಎಂದ ಶಾಸಕ ಎಂ.ಅಶ್ವಿನ್ ಕುಮಾರ್.
ತಿ.ನರಸೀಪುರ. ಅ.20:-ಮಹರ್ಷಿ ವಾಲ್ಮೀಕಿ ಅವರು ರಚಿಸಿರುವ ರಾಮಾಯಣ ಎಂಬ ಮಹಾಕಾವ್ಯ ಇಡೀ ವಿಶ್ವಕ್ಕೆ ಭಾರತ ನೀಡಿದ ಬಹುದೊಡ್ಡ ಸಾಹಿತ್ಯ ಕೊಡುಗೆಯಾಗಿದೆ ಎಂದು ಶಾಸಕ ಎಂ.ಅಶ್ವಿನ್ ಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದರು.
ಪಟ್ಟಣದ ತಾಲ್ಲೂಕು ಕಛೇರಿಯ ಹೊರ ಆವರಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ, ಪರಿಶಿಷ್ಟ ವರ್ಗಗಳ ಅಭಿವೃದ್ಧಿ ಇಲಾಖೆ ಹಾಗೂ ತಾಲ್ಲೂಕು ನಾಯಕ ಸಂಘ ಇವರ ವತಿಯಿಂದ ಹಮ್ಮಿಕೊಂಡಿದ್ದ ಆದಿ ಕವಿ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮನ್ನು ದೀಪ ಬೆಳಗುವ ಮೂಲಕ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಜನ ಸಮುದಾಯದ ಎಲ್ಲ ಸಮಸ್ಯೆಗಳು, ಸಂಕಟಗಳು, ಸವಾಲುಗಳಿಗೆ ವಾಲ್ಮೀಕಿ ರಾಮಾಯಣದಲ್ಲಿ ಉತ್ತರ ಸಿಗುತ್ತದೆ. ಮಾನವೀಯ ಗುಣಗಳನ್ನು ಮೈಗೂಡಿಸಿ ಕೊಳ್ಳುವುದು ಸೇರಿದಂತೆ ಉತ್ತಮ ಸಮಾಜ ನಿರ್ಮಾಣದ ಮಹತ್ವದ ಸಂಗತಿಗಳನ್ನು ರಾಮಾಯಣ ಮಹಾಕಾವ್ಯದಿಂದ ನಾವು ಕಲಿಯಬಹುದಾಗಿದೆ. ಜಾತಿ-ಧರ್ಮದ ಹೆಸರಿನಲ್ಲಿ ಮನುಷ್ಯ-ಮನುಷ್ಯರ ನಡುವಿನ ಸಂಬಂಧಗಳು ಕುಸಿಯುತ್ತಿರುವ ಪ್ರಸ್ತುತ ದಿನಗಳಲ್ಲಿ ಆದಿ ಕವಿ ಮಹರ್ಷಿ ವಾಲ್ಮೀಕಿ ಅವರು ರಚಿಸಿದ ಮಹಾಕಾವ್ಯ ಎಲ್ಲರಿಗೂ ದಾರಿದೀಪವಾಗಿ ತೋರುತ್ತದೆ ಎಂದರು.
ವಾಲ್ಮೀಕಿ ಸಮಾಜಕ್ಕೆ ಬಹುದೊಡ್ಡ ಸಾಂಸ್ಕೃತಿಕ ಪರಂಪರೆ ಇದ್ದು, ಅದನ್ನು ಜವಬ್ದಾರಿಯುತವಾಗಿ ಕಾಪಾಡಿಕೊಂಡು ಹೋಗಬೇಕಾದ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಅಲ್ಲದೆ ಮಕ್ಕಳಿಗೆ ಉನ್ನತ ಶಿಕ್ಷಣ ನೀಡುವ ಮೂಲಕ ಅವರ ಭವಿಷ್ಯವನ್ನು ಕಟ್ಟಿಕೊಡಬೇಕಾದ ಕಾರ್ಯವನ್ನು ಸಮಾಜದ ಬಂದುಗಳು ಮಾಡಬೇಕು ಹಾಗೂ ಸರ್ಕಾರ ನೀಡುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ವಾಲ್ಮೀಕಿ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳು ಹಾಗೂ ಕ್ರೀಡೆಯಲ್ಲಿ ಸಾಧಾನೆ ಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಪುರಸಭೆ ಪ್ರಭಾರ ಅಧ್ಯಕ್ಷೆ ಪ್ರೇಮ, ದಂಡಾಧಿಕಾರಿ ಬಿ. ಗಿರಿಜಾ, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ, ಉಪ ತಹಶೀಲ್ದಾರ್ ಜೆ.ಕೆ.ಪ್ರಭುರಾಜ್, ಕ್ಷೇತ್ರ ಶಿಕ್ಷಣಾಧಿಕಾರಿ ಮರಿಸ್ವಾಮಿ,ಪೊಲೀಸ್ ನಿರೀಕ್ಷಕ ಕೃಷ್ಣಪ್ಪ,ಪರಿಶಿಷ್ಟ ವರ್ಗಗಳ ಅಭಿವೃದ್ಧಿ ಇಲಾಖೆ ಅಧಿಕಾರಿ ಕೋಮಲ,ಮುಖ್ಯ ಭಾಷಣಕಾರ ವೀರಭದ್ರಸ್ವಾಮಿ,ಮಾಜಿ ಜಿ.ಪಂ. ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ತಲಕಾಡು ಮಂಜುನಾಥ್, ಪುರಸಭೆ ಸದಸ್ಯರಾದ ಸಿಸ್ಟಮ್ ಸಿದ್ದು.ಮಂಜುನಾಥ್, ಅರ್ಜುನ್,ಗ್ರಾ.ಪಂ.ಉಪಾಧ್ಯಕ್ಷ ನಾಗರಾಜು, ಮಾಜಿ.ಜಿ.ಪಂ.ಸದಸ್ಯ ಗದ್ದೆ ಮೊಳೆ ಹೊನ್ನನಾಯಕ,ಲೋಕೇಶ್ ನಾಯಕ ಮುಖಂಡರಾದ ಚಿನ್ನಸ್ವಾಮಿ, ಶಶಿಧಾರ್, ಆಲಗೂಡು ನಾಗರಾಜು,ಕರಿಯಪ್ಪ,ಕರುಹಟ್ಟಿ ಮಹದೇವಯ್ಯ, ಕಿರಗಸೂರು ಶಂಕರ್, ವಿಚಾರವಾದಿ ಪ್ರಭುಸ್ವಾಮಿ,ಶಂಕರ್,ಹೆಮ್ಮಿಗೆ ಹೊನ್ನನಾಯಕ,ತಲಕಾಡು ಸುಂದರನಾಯಕ್, ಗೋವಿಂದ ರಾಜ್ ಮತ್ತಿತರರು ಹಾಜರಿದ್ದರು.



Post Comment