Loading Now

ಸಾಗರದಲ್ಲಿ ಅಂಬೇಡ್ಕರ್ ಜಯಂತ್ಯುತ್ಸವದಲ್ಲಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ

ಸಾಗರ : ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಯಾವುದೇ ಪೂರ್ವಗ್ರಹವಿಲ್ಲದ ಪರಿಪೂರ್ಣ ತಿಳಿವಳಿಕೆ ಹೊಂದಿದ್ದ ಧೀಮಂತರಾಗಿದ್ದರು ಎಂದು ಉನ್ನತ ಶಿಕ್ಷಣ ಹಾಗೂ ಐಟಿ/ಬಿಟಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

ತಾಲ್ಲೂಕು ಬಿಜೆಪಿ ಘಟಕ ಗುರುವಾರ ಏರ್ಪಡಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಜಯಂತ್ಯುತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಶೋಷಿತ ವರ್ಗದಲ್ಲಿ ಹುಟ್ಟಿದ ಅಂಬೇಡ್ಕರ್ ಅವರು ಪರಿಶ್ರಮದಿಂದ ಜ್ಞಾನಾರ್ಜನೆ ಮಾಡಿ ತಮ್ಮ ಪ್ರತಿಭೆಗೆ ಸಾಣೆ ಹಿಡಿದುಕೊಂಡಿದ್ದರು ಎಂದು ಅಭಿಪ್ರಾಯಪಟ್ಟರು.

ಅಂಬೇಡ್ಕರ್ ಅವರು ಶಿಕ್ಷಣ ತಜ್ಞರಾಗಿ, ವಕೀಲರಾಗಿ, ಆರ್ಥಿಕ ತಜ್ಞರಾಗಿ, ಪತ್ರಕರ್ತರಾಗಿ, ಸಮಾಜ ಸೇವಕರಾಗಿ, ಎಲ್ಲಾ ಧರ್ಮಗಳ ಬಗ್ಗೆ ತಿಳಿವಳಿಕೆ ಹೊಂದಿ ಹಲವಾರು ಕ್ಷೇತ್ರಗಳಲ್ಲಿ ಸಾಧನೆ ಮಾಡಿದ್ದರು. ನಮಗೆ ಸಂವಿಧಾನವನ್ನ ಕೊಟ್ಟ ಅವರು. ವಿಶ್ವಮಾನವರಾಗಿದ್ದರು ಎಂದು ವಿವರಿಸಿದರು.

Post Comment

You May Have Missed