ಸೋಂಕಿತರ ಸಂಖ್ಯೆ ೨೫೨ಕ್ಕೆ ಏರಿಕೆ
ಕೋಲಾರ: ಜಿಲ್ಲೆಯಲ್ಲಿ ಹೊಸದಾಗಿ ೩೦ ಮಂದಿಗೆ ಕೊರೊನಾ ಸೋಂಕು ತಗುಲಿರುವುದು ಭಾನುವಾರ ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ ೨೫೨ಕ್ಕೆ ಏರಿಕೆಯಾಗಿದೆ. ಕೋಲಾರ ತಾಲ್ಲೂಕಿನ ೧೦ ಮಂದಿಗೆ, ಮಾಲೂರು ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ ಇಬ್ಬರಿಗೆ, ಬಂಗಾರಪೇಟೆ ತಾಲ್ಲೂಕಿನ ಒಬ್ಬರಿಗೆ, ಕೆಜಿಎಫ್ ತಾಲ್ಲೂಕಿನ ೧೧ ಮಂದಿಗೆ, ಮುಳಬಾಗಿಲು ತಾಲ್ಲೂಕಿನ ೪ ಮಂದಿಗೆ ಸೋಂಕು ಬಂದಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ.



Post Comment