Loading Now

ಹನೂರು: ತಾಲ್ಲೂಕಿನ ಕೌದಳ್ಳಿ ಗ್ರಾಮದ ಹೊಸ ಬಡಾವಣೆ ಗ್ರಾಮ ಪಂಚಾಯತಿ ಅಧ್ಯಕ್ಷರ ಮನೆ ಹತ್ತಿರ ಇರುವ ವಿದ್ಯುತ್ ಕಂಬಗಳು ತುಕ್ಕು ಹಿಡಿದು ಮುರಿದು ಬೀಳುವ ಹಂತಕ್ಕೆ ತಲುಪಿ ಅಪಾಯಕ್ಕೆ ಆಹ್ವಾನ ನೀಡುತ್ತಿದೆ

ಹನೂರು: ತಾಲ್ಲೂಕಿನ ಕೌದಳ್ಳಿ ಗ್ರಾಮದ ಹೊಸ ಬಡಾವಣೆ ಗ್ರಾಮ ಪಂಚಾಯತಿ ಅಧ್ಯಕ್ಷರ ಮನೆ ಹತ್ತಿರ ಇರುವ ವಿದ್ಯುತ್ ಕಂಬಗಳು ತುಕ್ಕು ಹಿಡಿದು ಮುರಿದು ಬೀಳುವ ಹಂತಕ್ಕೆ ತಲುಪಿ ಅಪಾಯಕ್ಕೆ ಆಹ್ವಾನ ನೀಡುತ್ತಿದೆ. ಕೂಡಲೇ ವಿದ್ಯುತ್ ಕಂಬಗಳನ್ನು ಬದಲಾಯಿಸಬೇಕು ಎಂದು ಸ್ದಳಿಯರ ಆಗ್ರಹಿಸಿದ್ದಾರೆ.

ಹಲವು ವರ್ಷಗಳ ಹಿಂದೆ ಈ ಹೊಸ ಬಡಾವಣೆಯಲ್ಲಿ ವಿದ್ಯುತ್ ಕಂಬಗಳನ್ನು ಅವೈಜ್ಞಾನಿಕವಾಗಿ ಹಾಕಲಾಗಿದ್ದು ಇಂದಿನ ದಿನಗಳಲ್ಲಿ ರಸ್ತೆ ಮದ್ಯದಲ್ಲಿ ಇರುವಂತೆ ಹಾಕಲಾಗಿದೆ. ಹಾಗೂ ವಿದ್ಯುತ್ ತಂತಿಗಳು ಕೈಗೆಟುಕುವಷ್ಟು ಹತ್ತಿರದಲ್ಲಿ ಇರುವುದು ಕಂಡುಬರುತ್ತದೆ. ಈಗಾಗಲೇ ಕಂಬಗಳು ತುಕ್ಕು ಹಿಡಿದು ಮುರಿದು ಬೀಳುವ ಪರಿಸ್ಥಿತಿಯಲ್ಲಿದೆ.

ಕಂಬಗಳು ಬದಲಾಯಿಸಿ ತೆರವು ಮಾಡುವಂತೆ ಗ್ರಾಮ ಪಂಚಾಯತಿ ಹಾಗೂ ವ್ಯಾಪ್ತಿಯ ವಿದ್ಯುತ್ ಇಲಾಖೆ ಇಂಜಿನಿಯರ್ ಅಧಿಕಾರಿಗಳು ಸಿಬ್ಬಂದಿಗಳ ಗಮನಕ್ಕೆ ತಿಳಿಸಿದರು ಯಾವುದೇ ರೀತಿಯ ಕ್ರಮ ಕೈಗೊಳ್ಳಲು ಮುಂದಾಗದೆ ನಿರ್ಲಕ್ಷ್ಯ ತೋರಿದ್ದಾರೆ ಇದರಿಂದ ಅನಾಹುತ ಸಂಭವಿಸಿದ ಸಮಯದಲ್ಲಿ ವಿದ್ಯುತ್ ಇಲಾಖೆಯವರೆ ಹೊಣೆ ಎಂದ ಇಲ್ಲಿನ ಸ್ಥಳಿಯ ನಿವಾಸಿಗಳು ಗ್ರಾಮ ಪಂಚಾಯತಿ ಅಧ್ಯಕ್ಷ ನಾಗರಾಜು ತಿಳಿಸಿದ್ದಾರೆ.

Previous post

೬೬ನೇ ಕನ್ನಡ ರಾಜ್ಯೋತ್ಸವ ಆಚರಣೆ ಹಾಗೂ ವಿಪ್ರ ಸಮುದಾಯದ ಕನ್ನಡ ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನಿಸಿ ಅಭಿನಂದಿಸಲಾಯಿತು

Next post

ಮೆಕ್ಯಾನಿಕಲ್ ಥ್ರೊಂಬೆಕ್ಟೊಮಿ ಚಿಕಿತ್ಸೆ ಪಡೆಯುವ ವಯಸ್ಕ ಪಾಶ್ರ್ವವಾಯು ರೋಗಿಗಳಲ್ಲಿ ಉತ್ತಮ ಫಲಿತಾಂಶ

Post Comment

You May Have Missed