Loading Now

75ರ ವರ್ಷದ ಸ್ವಾತಂತ್ರ್ಯ ಅಮೃತಮಹೋತ್ಸವ ಪಾದಯಾತ್ರೆಗೆ ನಾಯಕ ಸಿದ್ದರಾಮಯ್ಯ ಚಾಲನೆ ನೀಡಿ ಬಿಜೆಪಿ ಸರ್ಕಾರ ದ ವಿರುದ್ಧ ವಾಗ್ದಾಳಿ ನಡೆಸಿಧಾರೆ .

 ತಾಂಡವಪುರ ಆಗಸ್ಟ್ 8 - ನಮ್ಮ ದೇಶಕ್ಕೆ ಸ್ವತಂತ್ರ ಬಂದು 75 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಅಮೃತ ಮಹೋತ್ಸವ ಅಂಗವಾಗಿ ಕಾಂಗ್ರೆಸ್ ಪಕ್ಷದ ಆದೇಶದಂತೆ ಪ್ರತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪಾದಯಾತ್ರೆ ಹಮ್ಮಿಕೊಂಡು ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಕಾಂಗ್ರೆಸ್ ಪಕ್ಷದ ನಾಯಕ ಸ್ವತಂತ್ರ ಹೋರಾಟಗಾರ ಮಹಾತ್ಮ ಗಾಂಧೀಜಿ , ಸಂವಿಧಾನದ ಕೊಟ್ಟಂತ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಹಾಗೂ ಸ್ವಾತಂತ್ರ್ಯ ಚಳುವಳಿಯಲ್ಲಿ ಭಾಗವಹಿಸಿದ ಎಲ್ಲಾ ಮಹನೀಯರನ್ನು ಸ್ಮರಿಸಿಕೊಂಡು ಜನರಲ್ಲಿ ಜಾಗೃತಿ ಮೂಡಿಸುವ ಅಮೃತ ಮಹೋತ್ಸವ ಪಾದಯಾತ್ರೆ ಕಾರ್ಯಕ್ರಮಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಚಾಲನೆ ನೀಡಿ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು .

ಅವರು ಇಂದು ನಂಜನಗೂಡು ತಾಲೂಕು ವರುಣಾ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಗಡೂರು ಗ್ರಾಮದ ಸರ್ಕಾರಿ ಪ್ರೌಢಶಾಲಾ ಅವನಲ್ಲಿಯ ಆವರಣದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಭಾಗವಹಿಸಿ ಪಾದಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬಿಜೆಪಿ ನಾಯಕರುಗಳು ಯಾರು ಕೂಡ ಸ್ವಾತಂತ್ರ್ಯ ಚಳುವಳಿಯಲ್ಲಿ ಹೋರಾಟ ಮಾಡಿಲ್ಲ ಅವರಿಗೆ ಸ್ವಾತಂತ್ರ್ಯ ಚಳುವಳಿಯ ಹರಿವು ಕೂಡ ಇಲ್ಲ ಆರೆಸ್ಸೆಸ್ ಮತ್ತು ಬಿಜೆಪಿಯವರು ಹಿಂದೆ ನಮ್ಮ ರಾಷ್ಟ್ರ ಧ್ವಜವನ್ನು ವಿರೋಧಿಸಿದವರು ಈಗ ಅವರು ಸ್ವಾತಂತ್ರ್ಯದ ಬಗ್ಗೆ ರಾಷ್ಟ್ರ ಧ್ವಜದ ಬಗ್ಗೆ ಮಾತನಾಡುವ ಮೂಲಕ ಜನರ ಸಿಂಪತಿ ದಿಟ್ಟಿಸಿ ನಾವು ರಾಷ್ಟ್ರ ಸ್ವಾತಂತ್ರ್ಯೋತ್ಸವದ ಪರವಾಗಿದ್ದೇವೆ ಎಂದು ಬಿಂಬಿಸಲು ಹೊರಟಿದ್ದಾರೆ .

ಆದರೆ ಬಿಜೆಪಿ ನಾಯಕರುಗಳಿಗೆ ಈ ಬಗ್ಗೆ ಮಾತನಾಡಲು ಯಾವುದೇ ನೈತಿಕತೆ ಇಲ್ಲ ಸ್ವಾತಂತ್ರ್ಯ ತಂದು ಕೊಟ್ಟವರು ಸ್ವಾತಂತ್ರ ಚಳುವಳಿಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರುಗಳು ಹೋರಾಟದಲ್ಲಿ ಮಡಿದವರು ಕಾಂಗ್ರೆಸ್ ನಾಯಕರುಗಳು ಇದರಲ್ಲಿ ಬಿಜೆಪಿಯವರು ಯಾರು ಕೂಡ ಮಾಡಿದಿಲ್ಲ ಎಂದು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು ಸಭೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವ ನಾರಾಯಣ್ ಮಾಜಿ ಸಚಿವ ಡಾಕ್ಟರ್ ಎಚ್ ಸಿ ಮಹದೇವಪ್ಪ ವರುಣ ಕ್ಷೇತ್ರದ ಉಸ್ತುವಾರಿ ಹಾಗೂ ಕಾರ್ಯದರ್ಶಿ ಜೋಯಿ ಜಾನ್ ಕ್ಷೇತ್ರದ ಶಾಸಕ ಡಾಕ್ಟರ್ ಯತಿಂದ್ರ ಸಿದ್ದರಾಮಯ್ಯನವರು ಮಾತನಾಡಿ ನಾವು ಈ ಪಾದಯಾತ್ರೆಯ ಮೂಲಕ ಮತ್ತೊಂದು ಸ್ವಾತಂತ್ರ್ಯ ಚಳುವಳಿಯ ನೆನಪಿಸಿ , ಈ ದೇಶವನ್ನು ಬಂಡವಾಳಶಾಹಿಗಳ ಕಪಿಮುಷ್ಟಿಯಿಂದ ಬಿಡಿಸಿಕೊಳ್ಳುವ ಹೋರಾಟವನ್ನು ಹಿಂದಿನಿಂದಲೇ ಮಾಡಬೇಕಾಗಿದೆ ಎಂದು ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು ಕಾರ್ಯಕರ್ತರಿಗೆ ಕರೆ ನೀಡಿದರು ಕಾರ್ಯಕ್ರಮಕ್ಕೂ ಮುನ್ನ ಸಂವಿಧಾನ ಶಿಲ್ಪಿ ಡಾಕ್ಟರ್ ಬಿಆರ್ ಅಂಬೇಡ್ಕರ್ ಪ್ರತಿಮೆಗೆ ಹಾಗೂ ಮಹಾತ್ಮ ಗಾಂಧೀಜಿ ಅವರ ಪ್ರತಿಭೆಗೆ ಮಾಲಾರ್ಪಣೆ ಮಾಡಿ ಪುಷ್ಪರ್ಚನೆ ಮಾಡಿ ಹೊಂದಿಸಿದರು .
ಈ ಕಾರ್ಯಕ್ರಮದಲ್ಲಿ ವರುಣ ಕ್ಷೇತ್ರದ ಉಸ್ತುವಾರಿ ಜೋಗಿ ಜಾನ್ ಮಾಜಿ ಸಂಸದ ಆರ್ ಧ್ರುವ ನಾರಾಯಣ್ ಮಾಜಿ ಸಚಿವ ಡಾಕ್ಟರ್ ಎಚ್ ಸಿ ಮಹದೇವಪ್ಪ ಶಾಸಕರಾದ ಡಾಕ್ಟರ್ ಯತೀಂದ್ರ ಸಿದ್ದರಾಮಯ್ಯ ಕೆಪಿಸಿಸಿ ಕಾರ್ಯದರ್ಶಿ ಎಸ್ ಸಿ ಬಸವರಾಜು ಗುರುಪಾದಸ್ವಾಮಿ ವರುಣ ಮಹೇಶ್ ವೀರಶೈವ ಮುಖಂಡ ಕುರಟ್ಟಿ ಮಹೇಶ್ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಬಿಎಂ ರಾಮು ಶಾಸಕರಾದಪುಟ್ಟರಂಗಶೆಟ್ಟಿ ಅನಿಲ್ ಚಿಕ್ಕಮಾದು , ಡಿ ರವಿಶಂಕರ್ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾಕ್ಟರ್ ಬಿ ಜೆ ವಿಜಯ್ ಕುಮಾರ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರನಾಥ್ , ಕಾಂಗ್ರೆಸ್ ಯುವ ಮುಖಂಡ ಸುನಿಲ್ , ಬೋಸ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಂಗಸ್ವಾಮಿ , ರಮೇಶ್ , ಮುದ್ದೆಗೌಡ , ಶ್ರೀಕಂಠೇಶ್ವರ ಯಾವ ಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಹೆಜ್ಜಿಗೆ ಇಂಧನ ಬಾಬು , ತಾಲೂಕು ಕುರುಬ ಸಂಘದ ಅಧ್ಯಕ್ಷ ಕೆಂಪಣ್ಣ , ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮಂಜುಳಾ, ಮಂಜುನಾಥ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಸರಸ್ವತಿ ಗಾರ್ಡನ್ ಮಹೇಶ್, ಅಭಿಷೇಕ್, ಗಾಯತ್ರಿ , ಮಹದೇವು , ಮುಖಂಡರಾದ ಪದ್ಮನಾಭ ತಗಡೂರು ಆರ್ ಮಹದೇವ್ ಶಿವರಾಮು ಶಿವನಾಗ ಬಾಲು ಗ್ರಾಮ ಪಂಚಾಯತಿ ಸದಸ್ಯರಾದ ರವಿ ಆನಂದ್ ಬಿರಯ್ಯ ಸೇರಿದಂತೆ ವರುಣ ಕ್ಷೇತ್ರದ ಸಾವಿರಾರು ಕಾರ್ಯಕರ್ತರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.


ಮಹೋತ್ಸವದ ಅಂಗವಾಗಿ ಮೈಸೂರಿನ ವರುಣಾ ವಿಧಾನಸಭೆ ಕ್ಷೇತ್ರದ ತಗಡೂರಿನಲ್ಲಿ ಇಂದು ಆಯೋಜಿಸಿದ್ದ ಪಾದಯಾತ್ರೆ ಹಾಗೂ ಸಭೆಯಲ್ಲಿ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಭಾಗವಹಿಸಿದ್ದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ, ಎಐಸಿಸಿ ಕಾರ್ಯದರ್ಶಿ ರೋಝಿ ಜಾನ್, ಮಾಜಿ ಸಚಿವ ಡಾ. ಎಚ್.ಸಿ. ಮಹಾದೇವಪ್ಪ, ಶಾಸಕರಾದ ಡಾ. ಯತೀಂದ್ರ ಸಿದ್ದರಾಮಯ್ಯ, ಅನಿಲ್ ಚಿಕ್ಕಮಾದು, ಡಾ. ತಿಮ್ಮಯ್ಯ, ಪಕ್ಷದ ಮೈಸೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಡಾ. ವಿಜಯಕುಮಾರ್ ಪಾಲ್ಗೊಂಡಿದ್ದರು.

Post Comment

You May Have Missed