“ರಮ್ಯ ರಾಮಸ್ವಾಮಿ”ಚಿತ್ರದ ನಾಯಕರಾಗಿ ಕ್ರೇಜಿಸ್ಟಾರ್ ರವಿಚಂದ್ರನ್.
ಎನ್.ಎಸ್.ರಾಜಕುಮಾರ್ ನಿರ್ಮಾಣದಲ್ಲಿ “ರಮ್ಯ ರಾಮಸ್ವಾಮಿ”
ಚಿ.ಗುರುದತ್ ನಿರ್ದೇಶನದ ಈ ಚಿತ್ರದ ನಾಯಕರಾಗಿ ಕ್ರೇಜಿಸ್ಟಾರ್ ರವಿಚಂದ್ರನ್.
ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಉತ್ತಮ ಚಿತ್ರಗಳನ್ನು ನೀಡಿರುವ ಎನ್ ಎಸ್ ರಾಜಕುಮಾರ್ ತಮ್ಮ ಓಂಕಾರ್ ಫಿಲಂಸ್ ಮೂಲಕ “ರಮ್ಯ ರಾಮಸ್ವಾಮಿ” ಎಂಬ ಚಿತ್ರವನ್ನು ಸದ್ಯದಲ್ಲೇ ಆರಂಭಿಸಲಿದ್ದಾರೆ.
ಜನಾರ್ದನ ಮಹರ್ಷಿ ಕಥೆ ಬರೆದು, ಚಿ.ಗುರುದತ್ ನಿರ್ದೇಶನ ಮಾಡಲಿರುವ ಈ ಚಿತ್ರದ ನಾಯಕರಾಗಿ ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯಿಸುತ್ತಿದ್ದಾರೆ. ರಾಮಸ್ವಾಮಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ರಮ್ಯ ಪಾತ್ರದಲ್ಲಿ ಯಾರು ನಟಿಸುತ್ತಿದಾರೆಂಬ ಕುತೂಹಲ ಎಲ್ಲರಲ್ಲೂ ಇದೆ. ಆ ಪಾತ್ರದಲ್ಲಿ ಖ್ಯಾತ ನಟಿಯೊಬ್ಬರು ನಟಿಸಲಿದ್ದು, ಯಾರು ನಟಿಸುತ್ತಾರೆಂಬುದನ್ನು ಸದ್ಯದಲ್ಲೇ ತಿಳಿಸಲಾಗುವುದೆಂದು ನಿರ್ಮಾಪಕರು ತಿಳಿಸಿದ್ದಾರೆ.
ಜಿ.ಎಸ್.ವಿ ಸೀತಾರಾಂ ಛಾಯಾಗ್ರಹಣ ಹಾಗೂ ಕೆ.ಜಿ.ಎಫ್ ಖ್ಯಾತಿಯ ರವಿ ಬಸ್ರೂರು ಅವರ ಸಂಗೀತ ನಿರ್ದೇಶನ ಈ ಚಿತ್ರಕ್ಕಿರಲಿದೆ. ಚಿತ್ರದ ಕುರಿತು ಹೆಚ್ಚಿನ ಮಾಹಿತಿ ಶೀಘ್ರದಲ್ಲೇ ಹೊರಬೀಳಲಿದೆ.

Post Comment