Loading Now

“ಗಿರ್ಕಿ”

ಎದಿತ್ ಫಿಲಂ ಫ್ಯಾಕ್ಟರಿ ಮತ್ತು ವಾಸುಕಿ ಮೂವೀಸ್ ಸಹಯೋಗದೊಂದಿಗೆ ತರಂಗ ವಿಶ್ವ ನಿರ್ಮಿಸಿರುವ “ಗಿರ್ಕಿ” ಚಿತ್ರದ ಮೋಷನ್ ಪೋಸ್ಟರನ್ನು ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಇತ್ತೀಚೆಗೆ ಬಿಡುಗಡೆ ಮಾಡಿ, ಶುಭ ಕೋರಿದ್ದಾರೆ. A2 music ಮೂಲಕ ಬಿಡುಗಡೆಯಾಗಿರುವ ಈ ಮೋಷನ್ ಪೋಸ್ಟರ್ ಗೆ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಸದ್ಯದಲ್ಲೇ ಟೀಸರ್ ಬಿಡುಗಡೆಯಾಗಲಿದ್ದು, ಮೇ ನಲ್ಲಿ ಚಿತ್ರ ತೆರೆಗೆ ಬರಲಿದೆ.
ಲವ್, ಥ್ರಿಲ್ಲರ್ ಹಾಗೂ ಕಾಮಿಡಿ ಕಥಾಹಂದರ ಹೊಂದಿರುವ ಈ ಚಿತ್ರವನ್ನು ವೀರೇಶ್ ಪಿ.ಎಂ.ನಿರ್ದೇಶಿಸಿದ್ದಾರೆ. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಸಹ ಇವರೇ ಬರೆದಿದ್ದಾರೆ. ಈ ಹಿಂದೆ ಯೋಗರಾಜ್ ಭಟ್ ಅವರೊಂದಿಗೆ ಕೆಲಸ ಮಾಡಿದ ಅನುಭವ ವೀರೇಶ್ ಪಿ.ಎಂ ಅವರಿಗಿದೆ.

ವಾಸುಕಿ ಭುವನ್ ಅವರ ಸಹ ನಿರ್ಮಾಣವಿರುವ ಈ ಚಿತ್ರಕ್ಕೆ ವೀರ್ ಸಮರ್ಥ್ ಸಂಗೀತ ನೀಡಿದ್ದಾರೆ‌. ಯೋಗರಾಜ್ ಭಟ್, ಜಯಂತ ಕಾಯ್ಕಿಣಿ, ವೀರೇಶ್.ಪಿ.ಎಂ ಹಾಡುಗಳನ್ನು ಬರೆದಿದ್ದಾರೆ. ನವೀನ್ ಕುಮಾರ್ ಛಲ್ಲ ಛಾಯಾಗ್ರಹಣ, ಮಧು ತುಂಬಕೆರೆ ಅವರ ಸಂಕಲನವಿರುವ ಈ ಚಿತ್ರಕ್ಕೆ
ವಿನೋದ್ ಮಾಸ್ಟರ್ ಸಾಹಸ ನಿರ್ದೇಶನ ಹಾಗೂ ರಾಮು, ಮೋಹನ್ ಅವರ ನೃತ್ಯ ನಿರ್ದೇಶನವಿದೆ.

ತಮ್ಮ ಕಾಮಿಡಿ ಮೂಲಕ ಮನೆಮಾತಾಗಿರುವ ತರಂಗ ವಿಶ್ವ ಹಾಗೂ ವಿಲೋಕ್ ರಾಜ್ ನಾಯಕರಾಗಿ ನಟಿಸಿದ್ದು, “ಬಿಗ್ ಬಾಸ್” ಖ್ಯಾತಿಯ ದಿವ್ಯ ಉರುಡುಗ ಹಾಗೂ ರಾಶಿ ಮಹದೇವ್ ನಾಯಕಿಯಾಗಿ ನಟಿಸಿದ್ದಾರೆ.

Post Comment

You May Have Missed