“ಡಿವೈನ್ ಟೈಡ್ಸ್”
ಲಹರಿ ಸಂಸ್ಥೆಯ ಮೂಲಕ ಖ್ಯಾತ ಸಂಗೀತ ನಿರ್ದೇಶಕ ರಿಕ್ಕಿಕೇಜ್ ನೇತೃತ್ವದಲ್ಲಿ ಎಂಬ ಅದ್ಭುತ
ಆಲ್ಬಂ ಮೂಡಿಬಂದಿದೆ. ಈ ಆಲ್ಬಂ ಗಾಗಿ ರಿಕ್ಕಿಕೇಜ್ ಪ್ರತಿಷ್ಠಿತ ಗ್ರ್ಯಾಮಿ ಅವಾರ್ಡ್ ಪಡೆದುಕೊಂಡಿದ್ದಾರೆ. ರಿಕ್ಕಿಕೇಜ್ ಅವರಿಗೆ ಗ್ರ್ಯಾಮಿ ಅವಾರ್ಡ್ ಬಂದಿರುವುದು ಇದು ಎರಡನೇ ಬಾರಿ.
ಈ ಸಂತಸ ಹಂಚಿಕೊಳ್ಳಲು ಲಹರಿ ಸಂಸ್ಥೆ ಸಮಾರಂಭ ಏರ್ಪಡಿಸಿತ್ತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರವಿಚಂದ್ರನ್, ಶಿವರಾಜ್ಕುಮಾರ್ ಸುನಿಲ್ ಪುರಾಣಿಕ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಲಹರಿ ಜೊತೆಗಿನ ಸಂಬಂಧ ಹಾಗೂ ಈ ಆಲ್ಬಂ ಸಾಂಗ್ ಬಗ್ಗೆ ಎಳೆಎಳೆಯಾಗಿ ಬಿಡಿಸಿಟ್ಟ ರಿಕ್ಕಿಕೇಜ್ ಎಲ್ಲರಿಗೂ ಧನ್ಯವಾದ ಅರ್ಪಿಸಿದರು.

Post Comment