Loading Now

“ಮಣಗಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷರ ಚುನಾವಣೆ”

ಹನೂರು ಜುಲೈ 22 – ಇಂದು ನಡೆದ ಮಣಗಳ್ಳಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಮಂಜುಳಾ ಪ್ರಭುಸ್ವಾಮಿ ಆಯ್ಕೆಯಾದರು.
ಮಣಗಳ್ಳಿ ಗ್ರಾಮ ಪಂಚಾಯತಿ ಕಚೇರಿಯಲ್ಲಿ ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಆಕಾಂಕ್ಷೆಯಲ್ಲಿ ನಂಜಒಡೆಯರ ದೊಡ್ಡಿ, ವಾರ್ಡ್ ನ ಮಂಜುಳಾ ಪ್ರಭುಸ್ವಾಮಿ ರವರು ಮಾತ್ರ ನಾಮಪತ್ರ ಸಲ್ಲಿಸಿದ್ದು, ಇವರ ವಿರುದ್ಧ ಬೇರೆ ಯಾವುದೇ ಸದಸ್ಯರು ನಾಮಪತ್ರ ಸಲ್ಲಿಸಿದ ಕಾರಣ ಅಂತಿಮವಾಗಿ. ಮಂಜುಳಾ ಅವರೇ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಬಗ್ಗೆ ಚುನಾವಣಾ ಅಧಿಕಾರಿಗಳು ಅಧಿಕೃತವಾಗಿ ಘೋಷಣೆ ಮಾಡಿದರು.

ಬಿಜೆಪಿ ಬೆಂಬಲಿತ 17 ಸದಸ್ಯರನ್ನು ಹೊಂದಿರುವ ಪಂಚಾಯತಿಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮೀಸಲಾತಿ ಇದ್ದು, ಮೊದಲೇ ನಿಗದಿಯಾಗಿದ್ದ ಒಪ್ಪಂದದಂತೆ 15 ತಿಂಗಳು ಅಧಿಕಾರ ಹಂಚಿಕೊಳ್ಳಲು ನಿಗದಿಯಾಗಿತ್ತು ಅದರಂತೆ ಇಂದು ಚುನಾವಣೆ ಮೂಲಕ ಅವಿರೋಧ ಆಯ್ಕೆ ನಡೆಯಿತು.
ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮಾತನಾಡಿದ ಮಂಜುಳಾರವರು ಪಂಚಾಯಿತಿಯ ಎಲ್ಲ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಂಚಾಯತಿ ವ್ಯಾಪ್ತಿಯ ಹಳ್ಳಿಗಳನ್ನು ಅಭಿವೃದ್ಧಿ ಮಾಡಲು ಶ್ರಮಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಚುನಾವಣೆ ಚುನಾವಣೆ ಅಧಿಕಾರಿ ನೀರಾವರಿ ಇಲಾಖೆಯ ಎಲ್ ಅಶೋಕ್, ಪಿಡಿಓ ನಾಗರಾಜ್ ಮೂರ್ತಿ, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಂಕರಮ್ಮ,ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ರಾಜಪ್ಪ, ಸದಸ್ಯರುಗಳಾದ ಮಲ್ಲಿಕಾರ್ಜುನ ಸ್ವಾಮಿ, ಸಿದ್ದರಾಜು, ಸೋಮಶೇಖರ್, ಕುಮಾರ್, ಬಸವಣ್ಣ, ಮಾದೇವ ಮತ್ತು ಪಂಚಾಯತಿ ಸಿಬ್ಬಂದಿಗಳು ಹಾಜರಿದ್ದರು.

Post Comment

You May Have Missed