Loading Now

ಇನ್ನೂ ೪ ದಿನ ಭಾರೀ ಮಳೆ


ಬೆಂಗಳೂರು ಸೆ.೬: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದ ವಿವಿಧೆಡೆ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಮುಂದಿನ ೪ ದಿನ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಸೆ.೬, ೭ರಂದು ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಆರೇಂಜ್ ಅಲರ್ಟ್ ಘೋಷಿಸಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಬೆಂಗಳೂರು, ಬೆಂ.ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ, ಬೆಳಗಾವಿ, ಕೊಪ್ಪಳ, ಗದಗ, ಧಾರವಾಡ ಮತ್ತು ಹಾವೇರಿಯಲ್ಲಿ ಸೆ.೬ರಿಂದ ಸೆ.೮ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Post Comment

You May Have Missed