Loading Now

ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ಕೆ.ಆರ್.ಪೇಟೆ: ತಾಲೂಕಿನ ಬೂಕನಕೆರೆ ಹೋಬಳಿಯ ಮಣಿಗನಹಳ್ಳಿ ಗ್ರಾಮದ ಶ್ರೀಚಾಮುಂಡೇಶ್ವರಿ ವಿದ್ಯಾ ಸಂಸ್ಥೆಯ ವತಿಯಿಂದ ದಸರಾ ನವರಾತ್ರಿ ಉತ್ಸವದ ಅಂಗವಾಗಿ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ನವರಾತ್ರಿಯ ವಿಶೇಷ ಪೂಜಾ ಕಾರ್ಯಕ್ರಮವನ್ನು ಮಣಿಗನಹಳ್ಳಿಯ ಚಾಮುಂಡೇಶ್ವರಿ ಸನ್ನಿಧಿಯಲಿ ಡಾ” ಕೆ. ಎನ್.ದಿನೇಶ್ ಮತ್ತು ಎಚ್.ಅನುಶ್ರೀ ಅವರ ನೇತೃತ್ವದಲ್ಲಿ ಹಮ್ಮಿಕೊಂಡಿದ್ದರು. ತಾಲೂಕಿನ ಮಣಿಗನಹಳ್ಳಿ ಗ್ರಾಮದ ಶ್ರೀ ಚಾಮುಂಡೇಶ್ವರಿ ವಿದ್ಯಾಸಂಸ್ಥೆ ಹಾಗೂ ಶ್ರೀ ಮಹೇಶ್ವರಿ ವಂಶಸ್ಥರಿಂದ 18ನೇ ವರ್ಷದ ದಸರಾ ಮಹೋತ್ಸವವನ್ನು ಮಣಿಗನಹಳ್ಳಿ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಹಾಗೂ ವಿಜಯದಶಮಿಯ ಪ್ರಯುಕ್ತ ವಿಶೇಷವಾಗಿ ಒಂಬತ್ತು ದಿನಗಳ ಕಾಲ ಪೂಜಾ ಕಾರ್ಯಕ್ರಮಗಳನ್ನು ನಡೆಸಿ ವಿಜಯದಶಮಿಯಂದು ಚಾಮುಂಡೇಶ್ವರಿ ದೇವಿಯ ಸನ್ನಿಧಿಯಲ್ಲಿ ದೇವಿಗೆ ಗೋಮೂತ್ರ ಎಳನೀರು, ಪನ್ನೀರು ಮತ್ತು ವಿವಿಧ ಬಗೆಯ ಹಣ್ಣು ಮತ್ತು ಹಾಲಿನ ಅಭಿಷೇಕ ಮಾಡಿ ವಿವಿಧ ಬಗೆಯ ಹೂಗಳಿಂದ ಅಲಂಕರಿಸಿ ಸನ್ನಿಧಿಯಲ್ಲಿ ವಿಶೇಷ ಪೂಜೆ, ಚಂಡಿ ಹೋಮ, ಹವನ, ಕುಂಭ ಹೋಮ, ಅಡ್ಡಪಲ್ಲಕ್ಕಿ ಉತ್ಸವ, ಅಕ್ಷರಭ್ಯಾಸ, ಗೋಪೂಜೆ, ಮಹಾಭಿಷೇಕ, ಆಯುಧಪೂಜೆ, ಬನ್ನಿಪೂಜೆ ಸಾಂಪ್ರದಾಯಕ ಕಾರ್ಯಕ್ರಮಗಳು ಅರ್ಥಪೂರ್ಣವಾಗಿ ನಡೆದವು.

Post Comment

You May Have Missed