Loading Now

ಸ್ಲಂ ಪ್ರದೇಶದ ಪ್ರತಿ ಮಕ್ಕಳಿಗೆ ಕಂಪ್ಯೂಟರ್ ತಂತ್ರಜ್ಞಾನ ತಲುಪುಬೇಕು

ಸಂಜೆ ಸಮಯ ಸುದ್ದಿ

ಬೆಂಗಳೂರು ನ.7: ಪ್ರಧಾನಿ ನರೇಂದ್ರ ಮೋದಿ ರವರ ಡಿಜಿಟಲ್ ಇಂಡಿಯ ಸ್ಲಂ ಪ್ರದೇಶದ ಪ್ರತಿ ಮಕ್ಕಳಿಗೆ ಕಂಪ್ಯೂಟರ್ ತಂತ್ರಜ್ಞಾನ ತಲುಪುಬೇಕು ಎಂದು ಚಿಕ್ಕಪೇಟೆ ಶಾಸಕ ಉದಯ್ ಗರುಡಚಾರ್ ಹೇಳಿದರು.

ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರ, ಹೊಂಬೇಗೌಡನಗರ ವಾರ್ಡ್‍ನಲ್ಲಿ ಸ್ಲಂ ಪ್ರದೇಶದ ಶಾಲಾ ಮಕ್ಕಳು ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಆನಾಥ ಮಕ್ಕಳಿಗೆ ಉಚಿತ ಕಂಪ್ಯೂಟರ್ ತರಬೇತಿ ಮತ್ತು ಪ್ರಾಜೆಟ್ಟ್ ವರ್ಕ್ ಮಾಡಲು ಅನುಕೂಲಕ್ಕೆ ಬಿಗ್-ಬಿ ಮತ್ತು ಮಣಿಪಾಲ್ ಇನ್ಯಟ್ಯೂಟ್ ಸಹಯೋಗದಲ್ಲಿ ಸ್ಲಂ ಪ್ರದೇಶದ ಶಾಲಾ ಮಕ್ಕಳು ಮತ್ತು ಆನಾಥ ಮಕ್ಕಳು ಕಾಲೇಜು ವಿದ್ಯಾರ್ಥಿಗಳಿಗೆ ತರಬೇತಿ ಕೇಂದ್ರ ಉದ್ಘಾಟನೆ ಮಾಡಿ ಮಾತನಾಡಿದರು.

ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಹಲವಾರು ಸ್ಲಂ ಪ್ರದೇಶವಿದೆ. ಅಲ್ಲಿ ಪ್ರತಿಭಾವಂತ ಮಕ್ಕಳು ಇದ್ದಾರೆ, ಅವರಿಗೆ ಉತ್ತಮ ಕಂಪ್ಯೂಟರ್ ತಂತ್ರಜ್ಞಾನ ಹೊಂದಲು ಮತ್ತು ಶಾಲಾ, ಕಾಲೇಜು ಮಕ್ಕಳ ಪ್ರಾಜೆಟ್ಟ್ ವರ್ಕ್ ಮಾಡಲು ಉಚಿತವಾಗಿ ಕಲಿಸುವುದರಿಂದ ಶ್ರೀಮಂತರ ಮಕ್ಕಳಿಗೆ ಸಿಗುವ ಕಂಪ್ಯೂಟರ್ ಶಿಕ್ಷಣ ಸ್ಲಂ ಪ್ರದೇಶದ ಮಕ್ಕಳಿಗೆ ಸಿಕ್ಕರೆ ಭಾರತ ಭವಿಷ್ಯ ಉಜ್ವಲವಾಗಲಿದೆ .ಪ್ರಧಾನಿ ನರೇಂದ್ರಮೋದಿ ಡಿಜಿಟಲ್ ಇಂಡಿಯ ಯಶ್ವಸಿಯಾಗಲು ಪ್ರತಿಯೊಬ್ಬರ ಸಹಕಾರ ಅಗತ್ಯ ಎಂದು ಹೇಳಿದರು.

ಅರಣ್ಯ ಅಭಿವೃದ್ದಿ ನಿಗಮ ನಿರ್ದೇಶಕಿ ಭಾಗ್ಯವತಿ ಅಮರೇಶ್ ಮಾತನಾಡಿ, ಶಿಕ್ಷಣದಿಂದ ದೇಶ ಅಭಿವೃದ್ದಿ ಸಾಧ್ಯ. ಆರ್ಥಿಕವಾಗಿ ಸಬಲರಾದವರಿಗೆ ಉನ್ನತ ಶಿಕ್ಷಣ ಸಿಗುತ್ತದೆ. ಆರ್ಥಿಕವಾಗಿ ಹಿಂದುಳಿದ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂದು ಉಚಿತವಾಗಿ ಕಂಪ್ಯೂಟರ್ ತರಭೇತಿ ಮತ್ತು ಪ್ರಾಜೆಟ್ಟ್ ವರ್ಕ್ ಮಾಡಲು 10 ಕಂಪ್ಯೂಟರ್‍ಗಳನ್ನು ಆಳವಡಿಸಲಾಗಿದೆ. ಆರ್ಥಿಕವಾಗಿ ಹಿಂದುಳಿದ ಮಕ್ಕಳು ಸಮಾಜದ ಮುಖ್ಯವಾಹಿನಿಗೆ ತರಬೇಕು ಎಂಬ ಆಶಯ ನಮ್ಮದು ಎಂದು ಹೇಳಿದರು.

ಮಾಹಿತಿ ಹಕ್ಕು ಅಧ್ಯಯನ ಸಂಸ್ಥೆ ಪ್ರಧಾನ ಕಾರ್ಯದರ್ಶಿ ಅಮರೇಶ್ (ಅಂಬರೀಶ್), ಚಲನಚಿತ್ರ ನಿರ್ಮಾಪಕರಾದ ಜಾಕ್ ಮಂಜ, ಬಿಜೆಪಿ ಪ್ರಮುಖ ಮುಖಂಡರು, ಸ್ಲಂ ಪ್ರದೇಶದ ಮಕ್ಕಳು ಮತ್ತು ಸ್ಥಳೀಯ ನಿವಾಸಿಗಳು ಪಾಲ್ಗೊಂಡಿದ್ದರು.

Post Comment

You May Have Missed